spot_img
Thursday, September 17, 2026
24.1 C
Hubballi

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ ವೈರಲ್ ಆಗಿ ವಿವಾದ ಸೃಷ್ಟಿಸಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವಿವಾದಿತ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್ ಮಂಜು ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. ವಿಡಿಯೋ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಆದರೆ, ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ ಯೂಟ್ಯೂಬರ್ ಮಂಜು ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. ತಾವು ಸ್ವಯಂಪ್ರೇರಿತವಾಗಿ ಠಾಣೆಗೆ ತೆರಳಿ ವಿಡಿಯೋ ಮಾಡಿಲ್ಲ. ಕಾನ್ಸ್‌ಟೇಬಲ್ ಯಶ್ವಂತ್ ಅವರ ಮೂಲಕ ತಮ್ಮನ್ನು ಠಾಣೆಗೆ ಕರೆಸಲಾಗಿತ್ತು. ಗಣಪತಿ ವಿಸರ್ಜನೆಗೆ ಸಂಬಂಧಿಸಿದ ಚರ್ಚೆ ನಡೆಯಲಿದ್ದು, ಅದನ್ನು ವಿಡಿಯೋ ಚಿತ್ರೀಕರಿಸುವಂತೆ ಇನ್ಸ್‌ಪೆಕ್ಟರ್ ಧನಂಜಯ್ ಅವರೇ ಸೂಚಿಸಿದ್ದರು ಎಂದು ಮಂಜು ಆರೋಪಿಸಿದ್ದಾರೆ.

ಗಣಪತಿ ವಿಸರ್ಜನೆ ಮೆರವಣಿಗೆಯ ಮಾರ್ಗ ಸೇರಿದಂತೆ ಹಲವು ವಿಚಾರಗಳ ಕುರಿತು ನಡೆದ ಚರ್ಚೆಯಲ್ಲಿ ಮಸೀದಿ ವಿಚಾರವೂ ಪ್ರಸ್ತಾಪವಾಗಿತ್ತು ಎಂದು ಮಂಜು ಹೇಳಿದ್ದಾರೆ. ಚರ್ಚೆಯ ವೇಳೆ ತಾವು ವಿಡಿಯೋ ಚಿತ್ರೀಕರಿಸಿದ್ದು, ಅದನ್ನು ಅಪ್ಲೋಡ್ ಮಾಡುವ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಧನಂಜಯ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಅಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಯಾವುದೇ ರೀತಿಯ ಎಚ್ಚರಿಕೆ ಅಥವಾ ಸೂಚನೆಯನ್ನೂ ನೀಡಿರಲಿಲ್ಲ ಎಂದು ಮಂಜು ತಿಳಿಸಿದ್ದಾರೆ.

ಇದೀಗ ಅದೇ ವಿಡಿಯೋ ಆಧರಿಸಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಮಂಜು ಹೇಳಿದ್ದಾರೆ. ವಿವಾದಿತ ಹೇಳಿಕೆ ತಮ್ಮಿಂದ ಬಂದದ್ದಲ್ಲ, ತಾವು ಕೇವಲ ಅಧಿಕಾರಿಗಳ ಸೂಚನೆಯಂತೆ ನಡೆದ ಚರ್ಚೆಯನ್ನು ಚಿತ್ರೀಕರಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಇನ್ಸ್‌ಪೆಕ್ಟರ್ ಧನಂಜಯ್ ತಮ್ಮ ಮೇಲಿನ ಆರೋಪಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಮಂಜು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದಲೇ ಸ್ಪಷ್ಟವಾಗಬೇಕಿದ್ದು, ಪ್ರಕರಣದ ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

Topics

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...
spot_img

Related Articles

Popular Categories

spot_img
error: Content is protected !!