spot_img
Thursday, September 17, 2026
24.1 C
Hubballi

ಧಾರವಾಡದಲ್ಲಿ ನಿಷೇಧಿತ ಪಿಓಪಿ ಗಣೇಶ ಮೂರ್ತಿಗಳ ದಂಧೆ? — ಪಾಲಿಕೆ ದಾಳಿ, ಮೂರ್ತಿಗಳು ಸೀಜ್

ಧಾರವಾಡ: ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳು ಬಾಕಿ… ಧಾರವಾಡ ಜಿಲ್ಲಾಡಳಿತ ಪಿಓಪಿ ಗಣೇಶ ಮೂರ್ತಿಗಳ ಬಳಕೆ ಹಾಗೂ ಮಾರಾಟಕ್ಕೆ ನಿಷೇಧ ಹೇರಿದೆ. ಆದರೂ ಧಾರವಾಡದ ರವಿವಾರಪೇಟೆಯಲ್ಲಿ ನಿಷೇಧಿತ ಪಿಓಪಿ ಗಣೇಶ ಮೂರ್ತಿಗಳ ತಯಾರಿ ಹಾಗೂ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ನ್ಯೂಸ್ 88 ಕರ್ನಾಟಕಕ್ಕೆ ಲಭಿಸಿದ ಮಾಹಿತಿಯ ಆಧಾರದಲ್ಲಿ ಸ್ಥಳಕ್ಕೆ ತೆರಳಿದ ವೇಳೆ ಗೂಡ್ಸ್ ವಾಹನದಲ್ಲಿ ಹತ್ತಾರು ಪಿಓಪಿ ಗಣೇಶ ಮೂರ್ತಿಗಳನ್ನು ಗೋದಾಮಿನಿಂದ ತಂದು ಇಳಿಸಲಾಗುತ್ತಿತ್ತು. ಈ ವೇಳೆ ಪ್ರಶ್ನಿಸಿದಾಗ ಮಾಧ್ಯಮದವರ ಮೇಲೆಯೇ ದಬ್ಬಾಳಿಕೆಗೆ ಮುಂದಾದ ಘಟನೆ ನಡೆದಿದೆ.

ಹಳೆಯ ಹಾಗೂ ಮುಕ್ಕಾದ ಪಿಓಪಿ ಮೂರ್ತಿಗಳನ್ನು ಮತ್ತೆ ಸರಿಪಡಿಸಿ ಮಾರಾಟಕ್ಕೆ ಸಿದ್ಧಪಡಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಪಿಓಪಿ ಗಣೇಶ ಮೂರ್ತಿಗಳು ಇರುವುದು ದೃಢಪಟ್ಟಿದ್ದು, ಮೂರ್ತಿಗಳನ್ನು ಪಾಲಿಕೆ ವಾಹನದಲ್ಲಿ ವಶಕ್ಕೆ ಪಡೆಯಲಾಯಿತು.

ಇದೇ ವೇಳೆ ಅಕ್ಕಪಕ್ಕದ ಗಣೇಶ ಮೂರ್ತಿ ಮಾರಾಟ ಮಳಿಗೆಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಡ್ಡಾಯವಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನೇ ಮಾರಾಟ ಮಾಡುವಂತೆ ಸೂಚನೆ ನೀಡಿದರು.

ಸ್ಥಳೀಯವಾಗಿ ರಾಜಕೀಯ ಪ್ರಭಾವ ಹೊಂದಿರುವುದಾಗಿ ಹೇಳಲಾಗುತ್ತಿರುವ ಯಲ್ಲಪ್ಪ ಸವಣೂರು ಅವರು ಈ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆದಿದೆ ಎಂಬ ಆರೋಪವೂ ಇದೆ. ಆದರೆ ಪಾಲಿಕೆ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಮೂರ್ತಿಗಳನ್ನು ಸೀಜ್ ಮಾಡಿರುವುದು ಗಮನಾರ್ಹ.

ಒಟ್ಟಿನಲ್ಲಿ ಧಾರವಾಡ ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲೆಯಾದ್ಯಂತ ಪಿಓಪಿ ಗಣೇಶ ಮೂರ್ತಿಗಳ ತಯಾರಿ, ಸಂಗ್ರಹ ಮತ್ತು ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!