ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ವತಿಯಿಂದ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ದೇಶಭಕ್ತಿ… ಶೌರ್ಯ… ತ್ಯಾಗದ ಪ್ರತೀಕವಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯನ್ನು ಮತ್ತಿಗಟ್ಟಿ ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯೋಧರು ಹಾಗೂ ಸಮಾಜಸೇವಕರಾದ ಪರಶುರಾಮ್ ದಿವಾನಂದ್ ಅವರು ಮುಖ್ಯ ಉದ್ಘಾಟಕರಾಗಿ ಭಾಗವಹಿಸಿದ್ದರು.
ಯುವ ನೇತಾರರು ಹಾಗೂ ಬಿಜೆಪಿ ಮುಖಂಡರಾದ ಡಾ. ಮಲ್ಲಿಕಾರ್ಜುನ್ ಬಾಳಿಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅವರ ದೇಶಾಭಿಮಾನ, ಧೈರ್ಯ ಮತ್ತು ತ್ಯಾಗದ ಜೀವನದ ಕುರಿತು ಯುವಕರಿಗೆ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸಂಜು ಪಾಟೀಲ್, ಸಿದ್ದು ಅಳಗವಾಡಿ ಸೇರಿದಂತೆ ಗ್ರಾಮದ ಗುರು-ಹಿರಿಯರು, ನಾಗರಿಕರು ಹಾಗೂ ಯುವಕ ಮಂಡಳಿಯ ಸರ್ವ ಸದಸ್ಯರು ಭಾಗವಹಿಸಿದ್ದರು.
ಸಂಗೊಳ್ಳಿ ರಾಯಣ್ಣ ಅವರ ಆದರ್ಶ, ಶೌರ್ಯ ಮತ್ತು ದೇಶಪ್ರೇಮವನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ಎಲ್ಲರೂ ಕ್ರಾಂತಿವೀರನಿಗೆ ಗೌರವ ನಮನ ಸಲ್ಲಿಸಿದರು.
ಒಟ್ಟಿನಲ್ಲಿ, ದೇಶಾಭಿಮಾನ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಆದರ್ಶಗಳನ್ನು ಸ್ಮರಿಸುವ ಮೂಲಕ ಮತ್ತಿಗಟ್ಟಿಯಲ್ಲಿ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.




