spot_img
Thursday, September 17, 2026
24.1 C
Hubballi

ಅಭಿವೃದ್ಧಿ ಹೆಸರಿನಲ್ಲಿ L&T ಕಂಪನಿ ಮಾಡುತ್ತಿರುವುದು ಸರಿನಾ..?

ಧಾರವಾಡದ ಮಹೇಬೂಬ್ ನಗರದಲ್ಲಿ L&T ಸಂಸ್ಥೆಯ ಕಾಮಗಾರಿ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಆರಂಭವಾಗಿ ಸುಮಾರು ಒಂದು ವರ್ಷ ಕಳೆದರೂ ಕೆಲಸ ಪೂರ್ಣಗೊಳ್ಳದಿರುವುದರಿಂದ ರಸ್ತೆಗಳು ಅವ್ಯವಸ್ಥೆಯಾಗಿ, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಯ ಹೆಸರಿನಲ್ಲಿ ರಸ್ತೆ ಅಗೆದು ಹಾಕಲಾಗಿದ್ದು, ಹಲವು ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆಯಲ್ಲಿ ನಿರ್ಮಾಣವಾಗಿರುವ ತೆಗ್ಗು-ಗುಂಡಿಗಳಿಂದ ಸಾರ್ವಜನಿಕರು ಪದೇ ಪದೇ ತೊಂದರೆಗೆ ಸಿಲುಕುತ್ತಿದ್ದಾರೆ. ಕೆಲ ದಿನಗಳ ಹಿಂದೆ ಒಂದು ಮಗು ತೆಗ್ಗಿಗೆ ಬಿದ್ದ ಘಟನೆ ನಡೆದಿದ್ದು, ಅದೇ ರೀತಿ ಬೈಕ್‌ನಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ ಬೈಕ್ ಸ್ಕಿಡ್ ಆಗಿ ತೆಗ್ಗಿಗೆ ಬಿದ್ದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೀಗ ಇಂದು ಮತ್ತೊಂದು ಘಟನೆ ನಡೆದಿದ್ದು, ಕಲ್ಲು ಸಾಗಿಸುತ್ತಿದ್ದ ಟ್ರಕ್‌ವೊಂದು ರಸ್ತೆ ಅವ್ಯವಸ್ಥೆಯಿಂದಾಗಿ ಪಲ್ಟಿಯಾಗಿದೆ ಎನ್ನಲಾಗಿದೆ.

ಇಷ್ಟೇ ಅಲ್ಲದೆ, ಮಳೆ ಬಂದಾಗ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತದೆ. ಮಳೆ ನೀರು ಹಾಗೂ ಗಟಾರ್ ನೀರು ಸೇರಿ ಮನೆಗಳಿಗೆ ನುಗ್ಗುತ್ತಿರುವುದರಿಂದ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸುಮಾರು ಒಂದು ವರ್ಷದಿಂದ ಕಾಮಗಾರಿ ನಡೆಯುತ್ತಿದೆ. ಆದರೆ ಇದುವರೆಗೂ ರಸ್ತೆ ಸರಿಯಾಗಿಲ್ಲ. ಮಕ್ಕಳು, ವೃದ್ಧರು ಹಾಗೂ ವಾಹನ ಸವಾರರು ಪ್ರತಿದಿನ ಭಯದಲ್ಲೇ ಓಡಾಡುವಂತಾಗಿದೆ. ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು.”

ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ಆರೋಪ.

ರಸ್ತೆ, ಚರಂಡಿ ಹಾಗೂ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳಿಗೆ ಯಾರು ಜವಾಬ್ದಾರರು? ಸಾರ್ವಜನಿಕರ ಸುರಕ್ಷತೆಗೆ ಯಾರು ಹೊಣೆ? ಎಂಬ ಪ್ರಶ್ನೆಯನ್ನು ಸ್ಥಳೀಯರು ಮುಂದಿಟ್ಟಿದ್ದಾರೆ.

ಕೂಡಲೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ L&T ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ಮಹೇಬೂಬ್ ನಗರದ ಜನರ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ L&T ಸಂಸ್ಥೆ ಕೂಡಲೇ ಸ್ಪಂದಿಸಿ, ರಸ್ತೆ ಮತ್ತು ಚರಂಡಿ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಈ ಸಮಸ್ಯೆಗೆ ಶೀಘ್ರ ಪರಿಹಾರ ಸಿಗಬೇಕಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!