ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ರಸ್ತೆಯಲ್ಲೇ ಭೀಕರ ಹತ್ಯೆ ನಡೆದಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಹುಬ್ಬಳ್ಳಿಯನ್ನೇ ಬೆಚ್ಚಿಬೀಳಿಸಿದೆ.
ಆತ ತನ್ನಷ್ಟಕ್ಕೇ ಬೈಕ್‌ನಲ್ಲಿ ಸಾಗುತ್ತಿದ್ದ, ಆದರೆ ಹೋಗುತ್ತಿದ್ದ ಬೈಕನ್ನೇ ಅಡ್ಡಗಟ್ಟಿದ ಇಬ್ಬರು ಹಂತಕರು ಸ್ಥಳದಲ್ಲೇ ಮಾರಕಾಸ್ತ್ರ ಬಳಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ರಸ್ತೆಯಲ್ಲೇ ಭೀಕರ ಹತ್ಯೆ ನಡೆದಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಹುಬ್ಬಳ್ಳಿಯನ್ನೇ ಬೆಚ್ಚಿಬೀಳಿಸಿದೆ.
ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನ ನಡು ರಸ್ತೆಯಲ್ಲೇ ಇಬ್ಬರು ಅಡ್ಡಗಟ್ಟಿ, ಕೈಯಲ್ಲಿದ್ದ ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿದ್ದಾರೆ. ದಾಳಿಯ ತೀವ್ರತೆಯಿಂದಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಹೀಗೆ ಹಾಡಹಗಲೇ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಬೈಕ್ ಸವಾರನನ್ನು ಅಡ್ಡಗಟ್ಟಿ ಮಚ್ಚಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ತಿಳಿಯುತ್ತಿದ್ದಂತೆ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ನಡೆದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಾಹಿತಿ ಕಲೆಹಾಕಲಾಗುತ್ತಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.




