spot_img
Thursday, September 17, 2026
24.1 C
Hubballi

ಮಳೆ ಕೊರತೆ, ರೈತರ ಸಂಕಷ್ಟ: ನವಲಗುಂದವನ್ನು ಬರಪೀಡಿತ ಘೋಷಿಸಲು ವಿನೋದ್‌ ಅಸೂಟಿ ಸರ್ಕಾರಕ್ಕೆ ಒತ್ತಾಯ

ಧಾರವಾಡ: 2025–26ನೇ ಸಾಲಿನಲ್ಲಿ ನವಲಗುಂದ ತಾಲೂಕಿನಲ್ಲಿ ಉಂಟಾಗಿರುವ ಮಳೆ ಅನಿಶ್ಚಿತತೆ, ಕೃಷಿ ಸಂಕಷ್ಟ ಹಾಗೂ ಬೆಳೆ ನಷ್ಟವನ್ನು ಪರಿಗಣಿಸಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿರುವ ಮನವಿಯಲ್ಲಿ, ನವಲಗುಂದ ತಾಲೂಕು ಕೃಷಿ ಪ್ರಧಾನ ಹಾಗೂ ಮಳೆ ಆಧಾರಿತ ಪ್ರದೇಶವಾಗಿದ್ದು, ಹವಾಮಾನ ವೈಪರೀತ್ಯ ಮತ್ತು ಮಳೆಯ ಅನಿಶ್ಚಿತತೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಮಳೆ ಕೊರತೆಯಿಂದ ಕೃಷಿಗೆ ಹೊಡೆತ

ಧಾರವಾಡ ಜಿಲ್ಲೆಯಲ್ಲಿ ಸರಾಸರಿ ವಾರ್ಷಿಕ ಮಳೆ ಸುಮಾರು 78.7 ಸೆಂ.ಮೀ. ಇದ್ದರೆ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕುಗಳಲ್ಲಿ ಮಳೆ ಪ್ರಮಾಣ ತುಲನಾತ್ಮಕವಾಗಿ ಕಡಿಮೆಯಾಗಿದ್ದು, ಸುಮಾರು 63.1ರಿಂದ 66.1 ಸೆಂ.ಮೀ. ವ್ಯಾಪ್ತಿಯಲ್ಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮುಂಗಾರು ಮಳೆಯನ್ನೇ ಪ್ರಮುಖವಾಗಿ ಅವಲಂಬಿಸಿರುವ ನವಲಗುಂದದ ಕೃಷಿ ವ್ಯವಸ್ಥೆಗೆ ಮಳೆ ಕೊರತೆ ಹಾಗೂ ವಿಳಂಬದಿಂದ ಬಿತ್ತನೆ, ಬೆಳೆ ಬೆಳವಣಿಗೆ ಮತ್ತು ರೈತರ ಆದಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

₹18.74 ಕೋಟಿ ಪರಿಹಾರಕ್ಕೆ ಕ್ರಮ

2025ರ ಆಗಸ್ಟ್‌ನಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪಗಳಿಂದ ಉಂಟಾದ ಬೆಳೆಹಾನಿಗೆ ಸಂಬಂಧಿಸಿದಂತೆ, ನವಲಗುಂದ ತಾಲೂಕಿನಲ್ಲಿ 18,433 ರೈತ ಫಲಾನುಭವಿಗಳನ್ನು ಗುರುತಿಸಿ, ಸುಮಾರು ₹18.74 ಕೋಟಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ, 2023ರ ಅಧಿಕೃತ ಬರ ಜ್ಞಾಪಕ ಪತ್ರದ ಪ್ರಕಾರ ನವಲಗುಂದ ತಾಲೂಕಿನಲ್ಲಿ 28,725 ಹೆಕ್ಟೇರ್ ಪ್ರದೇಶದಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ದಾಖಲಾಗಿತ್ತು. ಸುಮಾರು ₹39.68 ಕೋಟಿ ಸಹಾಯಧನಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಅಂಕಿ-ಅಂಶಗಳು ತಾಲೂಕು ಬರ ಪರಿಸ್ಥಿತಿಗೆ ಎಷ್ಟು ಸೂಕ್ಷ್ಮವಾಗಿದೆ ಎಂಬುದನ್ನು ತೋರಿಸುತ್ತವೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಸಮಗ್ರ ಸಮೀಕ್ಷೆಗೆ ಆಗ್ರಹ

ನವಲಗುಂದ ತಾಲೂಕಿನ ಪ್ರಸಕ್ತ ಪರಿಸ್ಥಿತಿಯನ್ನು ತಕ್ಷಣ ಸಮಗ್ರವಾಗಿ ಪರಿಶೀಲಿಸಿ, ಮಳೆ ಪ್ರಮಾಣ, ಬಿತ್ತನೆ ಪ್ರದೇಶ, ಬೆಳೆಗಳ ಸ್ಥಿತಿ, ಬೆಳೆ ನಷ್ಟ, ಕೆರೆ-ಕೊಳವೆಬಾವಿಗಳ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಸಮೀಕ್ಷಾ ವರದಿಯ ಆಧಾರದ ಮೇಲೆ ನವಲಗುಂದವನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ಅರ್ಹ ರೈತರಿಗೆ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ತ್ವರಿತ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ರೈತರು, ಜಾನುವಾರುಗಳ ರಕ್ಷಣೆಗೆ ವಿಶೇಷ ಕ್ರಮ

ರೈತರ ಕೃಷಿ ಸಾಲ ಮರುಪಾವತಿಗೆ ಸಡಿಲಿಕೆ ಹಾಗೂ ಸಾಲ ಪುನರ್‌ರಚನೆ, ಜಾನುವಾರುಗಳಿಗೆ ಮೇವು ಬ್ಯಾಂಕ್ ಮತ್ತು ಅಗತ್ಯವಿರುವ ಕಡೆ ಗೋಶಾಲೆ ವ್ಯವಸ್ಥೆ, ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿದೆ.

ಅಲ್ಲದೆ, ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅಡಿಯಲ್ಲಿ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ರೈತರಿಗೆ ಬೀಜ, ಮೇವು, ಬೆಳೆ ವಿಮೆ ಹಾಗೂ ಕೃಷಿ ಸಲಹಾ ಸೇವೆಗಳನ್ನು ತುರ್ತು ಆಧಾರದ ಮೇಲೆ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.

“ನವಲಗುಂದ ತಾಲೂಕಿನ ಪ್ರಸಕ್ತ ಮಳೆ, ಬೆಳೆ ಹಾಗೂ ನೀರಿನ ಪರಿಸ್ಥಿತಿಯನ್ನು ತುರ್ತಾಗಿ ಪರಿಗಣಿಸಿ, ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ರೈತರು ಮತ್ತು ಸಾರ್ವಜನಿಕರ ರಕ್ಷಣೆಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು” ಎಂದು ಮನವಿದಾರರು ಒತ್ತಾಯಿಸಿದ್ದಾರೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!