spot_img
Thursday, September 17, 2026
28.1 C
Hubballi

ಹುಬ್ಬಳ್ಳಿಯನ್ನೇ ಬೆಚ್ಚಿಬೀಳಿಸಿದ್ದ ಮ*ರ್ಡರ್ ಕೇಸ್‌: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಕಳೆದ ಶುಕ್ರವಾರ ಮಟಮಟ ಮಧ್ಯಾಹ್ನವೇ ನಡು ರಸ್ತೆಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸಿಪಿ ಶಿವಾನಂದ ಚಲವಾದಿ ನೇತೃತ್ವದ ತಂಡ ಮುಂಜಾನೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಗಬ್ಬೂರು ಬೈಪಾಸ್‌ ಬಳಿ ವಶಕ್ಕೆ ಪಡೆದಿದೆ.

ಕೊಲೆಯಾದ ಯುವಕನನ್ನು ದಾದಾಪೀರ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಹುಬ್ಬಳ್ಳಿಯ ಈಶ್ವರ ನಗರದ ವೀರೇಂದ್ರ ಮಟ್ಟಿ ತಳಕಲ್ ಹಾಗೂ ದೀಪಕ್ ಚಲವಾದಿ ಆರೋಪಿಗಳೆಂದು ಹೇಳಲಾಗುತ್ತಿದೆ.

ಈ ಕೊಲೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ಪೊಲೀಸರ ತನಿಖೆಯಲ್ಲಿ ವ್ಯಕ್ತವಾಗಿದೆ. 2015ರಲ್ಲಿ ಈಶ್ವರ ನಗರದಲ್ಲಿ ಮಾರುತಿ ತಳಕಲ್ ಎಂಬಾತನ ಕೊಲೆ ನಡೆದಿತ್ತು. ಆ ಪ್ರಕರಣದಲ್ಲಿ ದಾದಾಪೀರ ಮೊದಲ ಆರೋಪಿಯಾಗಿದ್ದ ಎನ್ನಲಾಗಿದ್ದು, ಬಳಿಕ ಪ್ರಕರಣ ರಾಜೀ ಮೂಲಕ ಇತ್ಯರ್ಥಗೊಂಡು ಖುಲಾಸೆಯಾಗಿತ್ತು ಎನ್ನಲಾಗಿದೆ.

ಇದೇ ಹಳೆಯ ಕೊಲೆ ಪ್ರಕರಣದ ದ್ವೇಷದ ಹಿನ್ನೆಲೆಯಲ್ಲಿ ದಾದಾಪೀರನ ಮೇಲೆ ದಾಳಿ ನಡೆದಿರಬಹುದೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ವಶಕ್ಕೆ ಪಡೆದಿರುವ ವೀರೇಂದ್ರ ಮಟ್ಟಿ ತಳಕಲ್, ಈ ಹಿಂದೆ ಕೊಲೆಯಾಗಿದ್ದ ಮಾರುತಿ ತಳಕಲ್ ಅವರ ಸಹೋದರ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಆರೋಪಿ ದೀಪಕ್ ಚಲವಾದಿ, ಮಾರುತಿ ಚಲವಾದಿ ಅವರ ಅಳಿಯ ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರ ಕಾರಣವೇನು? ದಾಳಿ ಪೂರ್ವನಿಯೋಜಿತವಾಗಿತ್ತೇ? ಇನ್ನೂ ಯಾರಾದರೂ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಮಧ್ಯಾಹ್ನ ನಡು ರಸ್ತೆಯಲ್ಲೇ ನಡೆದಿದ್ದ ಈ ಕೊಲೆ ಪ್ರಕರಣ ಹುಬ್ಬಳ್ಳಿ ನಗರದಲ್ಲಿ ಆತಂಕ ಮೂಡಿಸಿತ್ತು. ಇದೀಗ ಆರೋಪಿಗಳು ಪೊಲೀಸರ ವಶಕ್ಕೆ ಸಿಕ್ಕಿರುವುದರಿಂದ ಪ್ರಕರಣದ ಹಿಂದಿರುವ ಸಂಪೂರ್ಣ ಸತ್ಯ ತನಿಖೆಯಿಂದ ಹೊರಬರಬೇಕಿದೆ.

Hot this week

ಗದಗ ಜಿಲ್ಲೆಯಲ್ಲಿ ಭಾವೈಕ್ಯತೆಯ ಅಲೆ! ಮಸೀದಿಯಲ್ಲಿ ಗಣಪತಿ ಪ್ರತಿಷ್ಠಾಪಿಸಿ ಮುಸ್ಲಿಂ ಯುವಕರಿಂದ ಪೂಜೆ

ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ...

ಹುಬ್ಬಳ್ಳಿಯಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ; ಸೆ.19ಕ್ಕೆ KLE ಆಸ್ಪತ್ರೆ ಉದ್ಘಾಟಿಸಲಿರುವ ಅಮಿತ್ ಶಾ!

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆ ಸಿಕ್ಕಿದೆ. ಹುಬ್ಬಳ್ಳಿಯ...

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

Topics

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...
spot_img

Related Articles

Popular Categories

spot_img
error: Content is protected !!