spot_img
Thursday, September 17, 2026
24.1 C
Hubballi

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ ಶಂಕರ ದೇವಸ್ಥಾನದ ಆವರಣದ ಪುಷ್ಕರಣಿ ವಿವಾದ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪುಷ್ಕರಣಿಯನ್ನು ಹಾಳುಗೆಡವಿ, ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ ಎಂದು ಆರೋಪಿಸಿ ಶ್ರೀರಾಮ ಸೇನೆ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ವಿರುದ್ಧ ಧಾರವಾಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ದೇವಸ್ಥಾನವು ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಅನುಮತಿ ಪಡೆಯದೇ ರಸ್ತೆ ಹಾಗೂ ಚರಂಡಿ ಕಾಮಗಾರಿ ನಡೆಸಲಾಗಿದೆ ಎಂದು ಸಂಘಟನೆ ಆರೋಪಿಸಿದೆ. ಪುರಾತನ ಪುಷ್ಕರಣಿಯನ್ನು ಮುಚ್ಚಿ ರಸ್ತೆ ನಿರ್ಮಿಸಿರುವುದು ದೇವಸ್ಥಾನದ ಐತಿಹಾಸಿಕ ಮಹತ್ವಕ್ಕೆ ಧಕ್ಕೆ ತಂದಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೂ ನೋವುಂಟು ಮಾಡಿದೆ ಎಂದು ಶ್ರೀರಾಮ ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಪಾಲಿಕೆ ಆಯುಕ್ತರ ಪಾತ್ರದ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಇನ್ನು ಪುಷ್ಕರಣಿ ವಿಚಾರವಾಗಿ ನಡೆದ ಪ್ರತಿಭಟನೆ ವೇಳೆ ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಭಾರೀ ಪೊಲೀಸ್ ಬಂದೋಬಸ್ತ್‌ಗೆ ಸರ್ಕಾರದ ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ವೆಚ್ಚವಾಗಿದ್ದು, ಈ ಸಾರ್ವಜನಿಕ ಹಣ ಪೋಲಾಗಲು ಪಾಲಿಕೆ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಸಂಘಟನೆ ಆರೋಪಿಸಿದೆ. ಉಂಟಾಗಿರುವ ಹೆಚ್ಚುವರಿ ವೆಚ್ಚದ ಹೊಣೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ರಾಜಕೀಯ ನಾಯಕರ ವಿರುದ್ಧ ಹೋರಾಟ ನಡೆಸುತ್ತಿದ್ದ ಹಿಂದೂಪರ ಸಂಘಟನೆಗಳು ಇದೀಗ ನೇರವಾಗಿ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತ ಮೆಟ್ಟಿಲೇರಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಕಾಮಗಾರಿಯ ಅನುಮತಿ, ಪುಷ್ಕರಣಿಯ ಸ್ಥಿತಿ ಹಾಗೂ ಪೊಲೀಸ್ ಬಂದೋಬಸ್ತ್‌ಗೆ ತಗುಲಿದ ವೆಚ್ಚದ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

Topics

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!