spot_img
Thursday, September 17, 2026
24.1 C
Hubballi

KPME ಕಾಯ್ದೆ ಉಲ್ಲಂಘನೆ ಬಯಲಿಗೆಳೆದ ನ್ಯೂಸ್ 88: ಪ್ರಕಾಶ್ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ಗೆ ತನಿಖೆಯ ಬಿಸಿ!

ಹುಬ್ಬಳ್ಳಿಯ ಅಮರಗೋಳದಲ್ಲಿರುವ ‘ಪ್ರಕಾಶ್ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ರೋಗಿಗಳ ಜೀವದ ಜೊತೆ ಬಹಿರಂಗವಾಗಿಯೇ ಚೆಲ್ಲಾಟವಾಡಲಾಗುತ್ತಿದೆ ಎಂದು ನಮ್ಮ ‘ನ್ಯೂಸ್ 88’ ಚಾನೆಲ್ ಬಿತ್ತರಿಸಿದ್ದ ಧ್ವನಿಪೂರ್ಣ ಹಾಗೂ ಸರಣಿ ವರದಿಗಳಿಗೆ ಇದೀಗ ಬೃಹತ್ ಮಟ್ಟದ ಸ್ಪಂದನೆ ಸಿಕ್ಕಿದೆ. ಯಾವುದೇ ರೀತಿಯ ಪ್ರಾಥಮಿಕ ವೈದ್ಯಕೀಯ ತಪಾಸಣೆಗಳನ್ನು ಮಾಡದೆ, ಕೇವಲ ದೇಹದ ನೋವು ಎಂದು ಬಂದ ತಕ್ಷಣವೇ ರೋಗಿಗಳಿಗೆ ರೇಂಡಮ್ ಆಗಿ ಇಂಜೆಕ್ಷನ್‌ಗಳನ್ನು ಚುಚ್ಚಲಾಗುತ್ತಿದೆ ಎಂಬ ಗಂಭೀರ ಆರೋಪದ ಬಗ್ಗೆ ನ್ಯೂಸ್ 88 ಅತ್ಯಂತ ಜವಾಬ್ದಾರಿಯುತವಾಗಿ ಸವಿವರ ವರದಿ ಬಿತ್ತರಿಸಿತ್ತು.

ಈ ಬಿಗ್ ಇಂಪ್ಯಾಕ್ಟ್ ವರದಿಯ ಬೆನ್ನಲ್ಲೇ ತಕ್ಷಣವೇ ಎಚ್ಚೆತ್ತುಕೊಂಡಿರುವ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHO), ಘಟನೆಗೆ ಸಂಬಂಧಿಸಿದಂತೆ ಅತ್ಯಂತ ಕಠಿಣ ತನಿಖೆಗೆ ಅಧಿಕೃತ ಆದೇಶ ಹೊರಡಿಸಿದೆ. ಸ್ಥಳೀಯರ ದೂರು ಹಾಗೂ ನ್ಯೂಸ್ 88 ತನಿಖಾ ವರದಿಯ ಆಧಾರದ ಮೇಲೆ ಅಧಿಕಾರಿಗಳು ಈಗ ಅಕ್ರಮ ಎಸಗುತ್ತಿದ್ದ ಆಸ್ಪತ್ರೆಯ ಕುತ್ತಿಗೆಗೆ ಕೈಹಾಕಿದೆ..

ನ್ಯೂಸ್ 88 ಚಾನೆಲ್‌ನಲ್ಲಿ ಬಿತ್ತರಗೊಂಡ ವರದಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 18.08.2026 ರಂದು ಅಧಿಕೃತ ವಿಚಾರಣಾ ಆದೇಶ ಪತ್ರವನ್ನು ಹೊರಡಿಸಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (KPME) ಹಾಗೂ ಪಿಸಿ ಮತ್ತು ಪಿಎನ್‍ಡಿಟಿ ಕಾಯ್ದೆಯ ಕಟ್ಟುನಿಟ್ಟಿನ ನಿಯಮಾವಳಿಗಳ ಪ್ರಕಾರ ಈ ಕ್ಲಿನಿಕ್ ಅಥವಾ ಆಸ್ಪತ್ರೆಯನ್ನು ನಡೆಸಲಾಗುತ್ತಿದೆಯೇ, ಅಲ್ಲಿನ ವೈದ್ಯರು ಅಧಿಕೃತ ಪದವಿ ಹಾಗೂ ನೋಂದಣಿ ಹೊಂದಿದ್ದಾರೆಯೇ ಮತ್ತು ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸಾ ಪದ್ಧತಿಗಳು ಸುರಕ್ಷಿತವಾಗಿವೆಯೇ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಲು ಮೂವರು ಹಿರಿಯ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಈ ತನಿಖಾ ತಂಡದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ KPME/PCPNDT ಜಿಲ್ಲಾ ನೋಡಲ್ ಅಧಿಕಾರಿಯಾದ ಡಾ. ಮಹೇಶ್ ಚಿತ್ತರಗಿ, ಹುಬ್ಬಳ್ಳಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಹುಲಗಣ್ಣ ಇಂಜಗನರಿ ಹಾಗೂ ಪ್ರಥಮ ದರ್ಜೆ ಸಹಾಯಕರಾದ ಶ್ರೀ ನಯೀಂ ಮುಲ್ಲಾ ಅವರನ್ನು ನಿಯೋಜಿಸಲಾಗಿದೆ. ಈ ತನಿಖಾಧಿಕಾರಿಗಳ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕ್ಲಿನಿಕ್‌ನ ದಾಖಲೆಗಳು, ಚಿಕಿತ್ಸಾ ಕೊಠಡಿಗಳು, ನೀಡಲಾಗುತ್ತಿರುವ ಔಷಧಗಳು ಮತ್ತು ಇಂಜೆಕ್ಷನ್‌ಗಳ ಮಾದರಿಗಳನ್ನು ಪರಿಶೀಲಿಸಲಿದೆ. ಇಷ್ಟೇ ಅಲ್ಲದೆ, ಮುಂದಿನ 7 ದಿನಗಳ ಒಳಗಾಗಿ ಸಮಗ್ರ ತನಿಖಾ ವರದಿಯನ್ನು ಕಚೇರಿಗೆ ಕಡ್ಡಾಯವಾಗಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಕಟ್ಟುನಿಟ್ಟಿನ ಆಜ್ಞೆ ಹೊರಡಿಸಿದ್ದಾರೆ.

ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ನ್ಯೂಸ್ 88 ಕೈಗೆತ್ತಿಕೊಂಡ ಈ ಜನಪರ ವರದಿಗೆ ದೊಡ್ಡ ಗೆಲುವು ಸಿಕ್ಕಂತಾಗಿದ್ದು, ಇಲಾಖೆ ರಚಿಸಿರುವ ತನಿಖಾ ತಂಡವು ನಡೆಸುವ ಪರಿಶೀಲನೆಯಲ್ಲಿ ಆಸ್ಪತ್ರೆಯ ಯಾವೆಲ್ಲಾ ಅಕ್ರಮಗಳು ಹೊರಬರಲಿವೆ ಎಂಬುದನ್ನು ಕಾದು ನೋಡಬೇಕಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!