ಹುಬ್ಬಳ್ಳಿ: ನಗರದ ಪ್ರತಿಷ್ಠಿತ ದೇವಾಂಗಪೇಟೆ ಓಣಿಯಲ್ಲಿ ‘ಹೈಟೆಕ್’ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೇ ಇಂತಹ ಚಟುವಟಿಕೆಗಳು ನಡೆಯುತ್ತಿವೆ ಎನ್ನಲಾಗಿದ್ದು, ಸ್ಥಳೀಯರಲ್ಲಿ ಹಲವು ಪ್ರಶ್ನೆಗಳು ಮೂಡಿವೆ.
ಹೊರನೋಟಕ್ಕೆ ಸಾಮಾನ್ಯ ಮನೆಗಳು ಅಥವಾ ವಾಣಿಜ್ಯ ಸ್ಥಳಗಳಂತೆ ಕಂಡುಬರುವ ಕೆಲವು ಕಡೆಗಳಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬರುತ್ತಿದೆ. ನಿರ್ದಿಷ್ಟ ವ್ಯಕ್ತಿಗಳ ಸಂಪರ್ಕದ ಮೂಲಕ ಗ್ರಾಹಕರನ್ನು ಕರೆಸಿಕೊಳ್ಳಲಾಗುತ್ತಿದೆ ಎನ್ನುವ ಮಾತುಗಳು ಸ್ಥಳೀಯ ವಲಯದಲ್ಲಿ ಹರಿದಾಡುತ್ತಿವೆ.
ಇನ್ನು ಈ ಕುರಿತು ಸ್ಥಳೀಯರಿಗೆ ಮಾಹಿತಿ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ? ಅಥವಾ ಮಾಹಿತಿ ಬಂದಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲವೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಪೊಲೀಸ್ ಇಲಾಖೆ ಈ ಆರೋಪಗಳ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಬೇಕಾಗಿದೆ. ಆರೋಪ ನಿಜವೇ ಅಥವಾ ಸುಳ್ಳೇ ಎಂಬುದನ್ನು ತನಿಖೆಯಿಂದಲೇ ಸ್ಪಷ್ಟಪಡಿಸಬೇಕಿದೆ.
ದೇವಾಂಗಪೇಟೆ ಓಣಿಯಲ್ಲಿ ನಿಜಕ್ಕೂ ಇಂತಹ ದಂಧೆ ನಡೆಯುತ್ತಿದೆಯೇ?ನಡೆಯುತ್ತಿದ್ದರೆ ಇದರ ಹಿಂದೆ ಯಾರಿದ್ದಾರೆ?ಪೊಲೀಸರಿಗೆ ಈ ಬಗ್ಗೆ ಮಾಹಿತಿ ಇದೆಯೇ?ಈ ಎಲ್ಲಾ ಪ್ರಶ್ನೆಗಳಿಗೆ ಅಶೋಕ್ ನಗರ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಪಷ್ಟ ಉತ್ತರ ಸಿಗಬೇಕಿದೆ ಜೊತೆಗೆ ನಿಮ್ಮ
ನ್ಯೂಸ್ 88 ಕರ್ನಾಟಕ ವಾಹಿನಿ ನಿರಂತರವಾಗಿ ಅಕ್ರಮ ವೇಶ್ಯಾವಾಟಿಕೆಗಳ ಜಾಲದ ಬಗ್ಗೆ ನಿರಂತರ ಕಾರ್ಯಾಚರಣೆ ಮುಂದುವರಿಸಲಿದೆ.




