spot_img
Thursday, September 17, 2026
28.1 C
Hubballi

ಮರಳು ಲಾರಿ ಬಿಡಲು ₹30 ಸಾವಿರ ಲಂಚ ಆರೋಪ; ಹೆಡ್‌ಕಾನ್ಸ್ಟೇಬಲ್‌-ಹೋಮ್‌ಗಾರ್ಡ್ ಲೋಕಾಯುಕ್ತ ಬಲೆಗೆ

ಧಾರವಾಡ: ಮರಳು ಸಾಗಿಸುತ್ತಿದ್ದ ಲಾರಿಯನ್ನು ಹುಬ್ಬಳ್ಳಿ–ಧಾರವಾಡ ಅವಳಿ ನಗರ ವ್ಯಾಪ್ತಿಯಲ್ಲಿ ಯಾವುದೇ ತೊಂದರೆಯಿಲ್ಲದೆ ಸಂಚರಿಸಲು ಬಿಡಲು ಲಾರಿ ಚಾಲಕನಿಂದ ₹30 ಸಾವಿರ ಲಂಚ ಪಡೆದ ಆರೋಪದ ಮೇರೆಗೆ ಪೊಲೀಸ್ ಹೆಡ್‌ಕಾನ್ಸ್ಟೇಬಲ್‌ ಹಾಗೂ ಓರ್ವ ಹೋಮ್‌ಗಾರ್ಡ್‌ನನ್ನು ಧಾರವಾಡ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಬಂಧಿತರನ್ನು ಧಾರವಾಡ ನಗರ ಠಾಣೆಯ ಹೆಡ್‌ಕಾನ್ಸ್ಟೇಬಲ್ ಹಸನ್‌ಸಾಬ ನದಾಫ್ ಹಾಗೂ ಹೋಮ್‌ಗಾರ್ಡ್ ಇಕ್ಬಾಲ್ ನದಾಫ್ ಎಂದು ಗುರುತಿಸಲಾಗಿದೆ.

ಕೊಪ್ಪಳ ಮೂಲದ ಲಾರಿ ಚಾಲಕ ಹನುಮಂತ ಎಂಬುವವರು ಮರಳು ಸಾಗಿಸುತ್ತಿದ್ದ ಲಾರಿಯನ್ನು ಅವಳಿ ನಗರ ವ್ಯಾಪ್ತಿಯಲ್ಲಿ ಬಿಡಲು ₹30 ಸಾವಿರ ನೀಡಬೇಕು ಎಂದು ಆರೋಪಿಗಳು ಒತ್ತಾಯಿಸಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹಣವನ್ನು ಫೋನ್‌ಪೇ ಮೂಲಕ ಪಾವತಿಸಲಾಗಿತ್ತು ಎಂದು ವರದಿಯಾಗಿದೆ. ಬಳಿಕ ಲಾರಿ ಚಾಲಕ ಧಾರವಾಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಹಣದ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆರೋಪಿಗಳ ಮೊಬೈಲ್ ಫೋನ್‌ಗಳನ್ನು ಸಹ ವಶಕ್ಕೆ ಪಡೆದು, ಹಣದ ವಹಿವಾಟು ಹಾಗೂ ಲಾರಿ ಚಾಲಕನೊಂದಿಗೆ ನಡೆದ ಸಂವಹನದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ? ಇದೇ ರೀತಿಯಲ್ಲಿ ಬೇರೆ ಲಾರಿ ಚಾಲಕರಿಂದಲೂ ಹಣ ಪಡೆದಿದ್ದಾರೆಯೇ? ಎಂಬುದರ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆಯಿದೆ. ಪೊಲೀಸ್ ಇಲಾಖೆಯ ಸಿಬ್ಬಂದಿಯೇ ಲಂಚ ಸ್ವೀಕಾರದ ಆರೋಪದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಧಾರವಾಡ ಪೊಲೀಸ್ ವಲಯದಲ್ಲಿ ಇದೀಗ ಚರ್ಚೆಗೆ ಗ್ರಾಸವಾಗಿದೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!