spot_img
Thursday, September 17, 2026
28.1 C
Hubballi

KPSC ನೇಮಕಾತಿ ಅಕ್ರಮ ಆರೋಪ: CBI ತನಿಖೆಗೆ ABVP ಆಗ್ರಹ

ಹುಬ್ಬಳ್ಳಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ABVP), ಪ್ರಕರಣದ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ವಿಶೇಷವಾಗಿ AEE ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಸೂಕ್ತ ತನಿಖೆ ಅಗತ್ಯ ಎಂದು ಸಂಘಟನೆ ಒತ್ತಾಯಿಸಿದೆ.

ಪರೀಕ್ಷೆಯ OMR ಉತ್ತರ ಪತ್ರಿಕೆಗಳ ತಿದ್ದುಪಡಿ ಸೇರಿದಂತೆ ಹಲವು ಅನುಮಾನಾಸ್ಪದ ಅಂಶಗಳು ಬೆಳಕಿಗೆ ಬಂದಿವೆ ಎಂದು ABVP ಆರೋಪಿಸಿದೆ. ಪ್ರಕರಣದ ಸಂಪೂರ್ಣ ಸತ್ಯ ಹೊರಬರಲು ತನಿಖೆಯನ್ನು CBIಗೆ ವಹಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಹೇಳಿದೆ.

ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಮತ್ತು KPSC ಸದಸ್ಯರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ABVP ಒತ್ತಾಯಿಸಿದೆ. ತನಿಖೆಗೆ ಅಗತ್ಯವಿರುವ CCTV ದೃಶ್ಯಾವಳಿಗಳನ್ನು ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ಆರೋಪವನ್ನೂ ಸಂಘಟನೆ ಮಾಡಿದ್ದು, ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದೆ.

KPSC ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ABVP ಆಗ್ರಹಿಸಿದೆ. ತನಿಖೆ ಯಾವುದೇ ರೀತಿಯ ಪ್ರಭಾವಕ್ಕೆ ಒಳಗಾಗದೆ ಪಾರದರ್ಶಕವಾಗಿ ನಡೆಯಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ತಿಳಿಸಿದೆ.

ಇದಲ್ಲದೆ ವಿದ್ಯಾರ್ಥಿಗಳ ಬಸ್‌ ಸಮಸ್ಯೆ, ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಸ್ಥಾಪನೆ, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ಸೇರಿದಂತೆ ಹಲವು ವಿಚಾರಗಳನ್ನೂ ABVP ಮುಂದಿಟ್ಟಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆಪ್ಟೆಂಬರ್‌ 8ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ABVP ಎಚ್ಚರಿಕೆ ನೀಡಿದೆ. KPSC ನೇಮಕಾತಿ ಪ್ರಕರಣವನ್ನು CBI ತನಿಖೆಗೆ ವಹಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಸಂಘಟನೆ ತಿಳಿಸಿದೆ..

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!