spot_img
Thursday, September 17, 2026
28.1 C
Hubballi

ಬರಗಾಲ ಘೋಷಣೆ ಮಾಡದಿದ್ದರೆ ಉಗ್ರ ಹೋರಾಟ: ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಎಚ್ಚರಿಕೆ

ಹುಬ್ಬಳ್ಳಿ: ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಸೆಪ್ಟೆಂಬರ್ 8ರೊಳಗೆ ಸರ್ಕಾರ ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ರೈತ ಸಮುದಾಯವನ್ನು ಒಗ್ಗೂಡಿಸಿಕೊಂಡು ಸರ್ಕಾರದ ವಿರುದ್ಧ ಬೃಹತ್ ಹಾಗೂ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.

ಸತತ ಮಳೆ ಕೊರತೆ ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಬೆಳೆದ ಹೆಸರು, ಉದ್ದು, ಹತ್ತಿ, ಗೋವಿನಜೋಳ, ಸೋಯಾಬಿನ್, ಕಬ್ಬು, ಮೆಣಸಿನಕಾಯಿ, ಈರುಳ್ಳಿ, ಶೇಂಗಾ ಹಾಗೂ ಪೇರಲ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಹಾನಿಗೀಡಾಗಿವೆ. ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರಾಜ್ಯ ಸರ್ಕಾರ ಮಾತ್ರ ರೈತರ ಸಂಕಷ್ಟಕ್ಕೆ ಸ್ಪಂದಿಸದೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು ಸಾಲ ಮಾಡಿ, ಬಡ್ಡಿಗೆ ಹಣ ತಂದು ಕೃಷಿ ಮಾಡಿದ್ದಾರೆ. ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ವೆಚ್ಚಕ್ಕಾಗಿ ಸಾವಿರಾರು ರೂಪಾಯಿ ಹೂಡಿಕೆ ಮಾಡಿದ್ದಾರೆ. ಆದರೆ ಬೆಳೆ ಕೈಗೆ ಬರುವ ಮುನ್ನವೇ ನಾಶವಾಗಿದ್ದು, ರೈತ ಕುಟುಂಬಗಳು ಆರ್ಥಿಕ ಸಂಕಷ್ಟದ ಅಂಚಿಗೆ ತಲುಪಿವೆ. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಸರ್ಕಾರ ರೈತರ ನೆರವಿಗೆ ಧಾವಿಸದಿರುವುದು ಅತ್ಯಂತ ಖಂಡನೀಯ ಎಂದು ಮುನೇನಕೊಪ್ಪ ಕಿಡಿಕಾರಿದ್ದಾರೆ.

ಪ್ರತಿ ಎಕರೆಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡಬೇಕು. ಅಲ್ಲದೆ, ತಕ್ಷಣವೇ ಬರಗಾಲ ಘೋಷಿಸಿ, ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸುವ ಮೂಲಕ ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೇವಲ ಅಧಿಕಾರಿಗಳ ವರದಿ ಮತ್ತು ಕಚೇರಿ ದಾಖಲೆಗಳನ್ನು ನಂಬಿಕೊಂಡು ಕುಳಿತುಕೊಳ್ಳದೆ, ಸರ್ಕಾರದ ಪ್ರತಿನಿಧಿಗಳು ನೇರವಾಗಿ ರೈತರ ಹೊಲಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಸ್ಪಂದಿಸಿ ಅಗತ್ಯ ಪರಿಹಾರ ಹಾಗೂ ನೆರವು ನೀಡಲಾಗುತ್ತಿತ್ತು. ಆದರೆ ಕಳೆದ ಮೂರುವರೆ ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟಕ್ಕೆ ಸಮರ್ಪಕವಾಗಿ ಸ್ಪಂದಿಸಿಲ್ಲ. ರೈತರ ಖಾತೆಗೆ ಒಂದೇ ಒಂದು ರೂಪಾಯಿ ಪರಿಹಾರ ತಲುಪಿಲ್ಲ ಎಂಬ ಆರೋಪ ಮಾಡಿರುವ ಅವರು, ಗ್ಯಾರಂಟಿಗಳ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯುವ ಸರ್ಕಾರ, ಅನ್ನದಾತರ ಬದುಕಿನ ಪ್ರಶ್ನೆ ಬಂದಾಗ ಮೌನಕ್ಕೆ ಶರಣಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯದಲ್ಲಿ ಸರ್ಕಾರ ಜೀವಂತವಿದೆಯೇ ಎಂಬ ಅನುಮಾನ ಜನರಲ್ಲಿ ಮೂಡುತ್ತಿದೆ. ರೈತರು ಬೆಳೆ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದರೂ ಸರ್ಕಾರಕ್ಕೆ ಅವರ ನೋವು ಕಾಣುತ್ತಿಲ್ಲ. ರೈತರ ಬದುಕಿನೊಂದಿಗೆ ಚೆಲ್ಲಾಟವಾಡುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್ 8 ಸರ್ಕಾರಕ್ಕೆ ಕೊನೆಯ ಗಡುವು. ಅಷ್ಟರೊಳಗೆ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವ ಕುರಿತು ಸ್ಪಷ್ಟ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರೈತಕುಲವನ್ನು ಸಂಘಟಿಸಿ ಸರ್ಕಾರಕ್ಕೆ ತಕ್ಕ ಉತ್ತರ ನೀಡುವ ರೀತಿಯ ಬೃಹತ್ ಹಾಗೂ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!