spot_img
Thursday, September 17, 2026
28.1 C
Hubballi

ನ್ಯೂಸ್ 88 ಬಿಗ್ ಇಂಪ್ಯಾಕ್ಟ್! ಹುಬ್ಬಳ್ಳಿಯ ಅಕ್ರಮ ಪಬ್ ಹಾವಳಿಗೆ ಬ್ರೇಕ್:ಕಮಿಷನರ್ ಖಡಕ್ ಎಚ್ಚರಿಕೆ

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಬ್ ಹಾವಳಿಯ ಬಗ್ಗೆ ನ್ಯೂಸ್ 88 ಕರ್ನಾಟಕ ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಪೊಲೀಸ್ ಕಮಿಷನರ್ ಆದೇಶದ ಮೇರೆಗೆ ಡಿಸಿಪಿ ಶೃತಿ ನೇತೃತ್ವದಲ್ಲಿ ಪಬ್ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಲಾಗಿದೆ.

ಹುಬ್ಬಳ್ಳಿಯಲ್ಲಿ ಮಿತಿ ಮೀರುತ್ತಿದ್ದ ಅಕ್ರಮ ಪಬ್ ಹಾವಳಿಯ ವಿರುದ್ಧ ನ್ಯೂಸ್ 88 ಕರ್ನಾಟಕ ನಿರಂತರವಾಗಿ ಧ್ವನಿ ಎತ್ತಿತ್ತು. ಲೇಟ್ ನೈಟ್ ಪಾರ್ಟಿಗಳು, ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕರ ಆತಂಕದ ಕುರಿತು ವರದಿ ಪ್ರಸಾರವಾಗುತ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಪೊಲೀಸ್ ಕಮಿಷನರ್ ಆದೇಶದ ಮೇರೆಗೆ ಡಿಸಿಪಿ ಶೃತಿ ನೇತೃತ್ವದಲ್ಲಿ ಪಬ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು

ಹುಬ್ಬಳ್ಳಿ ನಗರದಲ್ಲಿ ಪಬ್‌ಗಳ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪಗಳು ದಿನದಿಂದ ದಿನಕ್ಕೆ ಕೇಳಿಬರುತ್ತಿದ್ದವು…ನಿಗದಿತ ಸಮಯ ಮೀರಿ ಪಾರ್ಟಿಗಳು…ರಾತ್ರಿ ತಡರವರೆಗೂ ಮೋಜು-ಮಸ್ತಿ…ನಿಯಮಗಳ ಉಲ್ಲಂಘನೆಯ ಆರೋಪ…ಇವೆಲ್ಲದರ ಬಗ್ಗೆ ನ್ಯೂಸ್ 88 ಕರ್ನಾಟಕ ನಿರಂತರವಾಗಿ ಧ್ವನಿ ಎತ್ತಿತ್ತು.
ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಾರ್ವಜನಿಕರು ಕೂಡ ಆಗ್ರಹಿಸುತ್ತಿದ್ದರು.
ಈ ಹಿನ್ನೆಲೆದಲ್ಲಿ ನ್ಯೂಸ್ 88 ಕರ್ನಾಟಕ ಪ್ರಸಾರ ಮಾಡಿದ ವರದಿ ಪೊಲೀಸ್ ಇಲಾಖೆಯ ಗಮನ ಸೆಳೆದಿದೆ.

ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಆದೇಶದ ಮೇರೆಗೆ ಡಿಸಿಪಿ ಶೃತಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಹುಬ್ಬಳ್ಳಿಯ ಪಬ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.ಪಬ್‌ನಲ್ಲಿ ನಿಯಮಗಳು ಪಾಲನೆಯಾಗುತ್ತಿವೆಯೇ?
ನಿಗದಿತ ಸಮಯಕ್ಕೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತಿದೆಯೇ?
ಅನುಮತಿ ಇಲ್ಲದ ಯಾವುದೇ ಚಟುವಟಿಕೆಗಳು ನಡೆಯುತ್ತಿವೆಯೇ?
ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ಪಬ್‌ನಲ್ಲಿದ್ದ ಕೆಲವರು ದಿಕ್ಕಾಪಾಲಾಗಿ ತೆರಳಿದ ದೃಶ್ಯಗಳು ಕೂಡ ಕಂಡುಬಂದಿವೆ.

ನಗರದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶವನ್ನು ಪೊಲೀಸ್ ಇಲಾಖೆ ಈ ಕಾರ್ಯಾಚರಣೆಯ ಮೂಲಕ ರವಾನಿಸಿದೆ ಅಂತಾನೆ ಹೇಳಬಹುದು
ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ…
ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು…
ಎಂಬ ಎಚ್ಚರಿಕೆಯೂ ಇದೀಗ ಹೊರಬಿದ್ದಿದೆ.
ಇನ್ನು ಹುಬ್ಬಳ್ಳಿಯಲ್ಲಿ ಪಬ್ ಸಂಸ್ಕೃತಿಯ ಹೆಸರಿನಲ್ಲಿ ನಡೆಯುವ ನಿಯಮ ಉಲ್ಲಂಘನೆಗಳ ಮೇಲೆ ಪೊಲೀಸ್ ಇಲಾಖೆ ಮತ್ತಷ್ಟು ನಿಗಾ ವಹಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ

ಒಟ್ಟಿನಲ್ಲಿ…ಹುಬ್ಬಳ್ಳಿಯ ಅಕ್ರಮ ಪಬ್ ಹಾವಳಿ ಕುರಿತು ನ್ಯೂಸ್ 88 ಕರ್ನಾಟಕ ಎತ್ತಿದ ಧ್ವನಿಗೆ ..
ಪೊಲೀಸ್ ಇಲಾಖೆಯ ಕಾರ್ಯಾಚರಣೆಗೆ ಕಾರಣವಾಗಿದೆ.ಇನ್ನು ಮುಂದೆ ಅಕ್ರಮ ಚಟುವಟಿಕೆಗಳ ವಿರುದ್ಧ ನಿಮ್ಮ ನ್ಯೂಸ್ 88 ಕರ್ನಾಟಕ ನಿರಂತವಾಗಿ ಕಾರ್ಯಾಚರಣೆ ನಡೆಸಲಿದ್ದು ಅಭಿಯಾನದ ಮೂಲಕ ನಮ್ಮ ಸಂಸ್ಕೃತಿ ಮತ್ತು ಯುವಕರು ಕೆಟ್ಟ ಚಟಕ್ಕೆ ಬಲಿ ಆಗದೆ ನಶಾ ಮುಕ್ತ ಸಮಾಜಕ್ಕೆ ಕಮಿಷನರ್ ಭೂಷಣ್ ಬೋರಸೆ ಅವರ ಜೊತೆ ನ್ಯೂಸ್ 88 ಕರ್ನಾಟಕ ಕೈ ಜೋಡಿಸಲಿದೆ ಅಂತ ಹೇಳಬಹುದು

Hot this week

ಆಂಟಿ ಜೊತೆ ಲವ್ವಿ-ಡವ್ವಿ; ಮದುವೆ ಮಾತು ನಂಬಿ ಹಣ ಕೊಟ್ಟ ನಟನಿಗೆ ರಾಡ್ ಏಟು!

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರ...

ವಿಡಿಯೋ ಮಾಡಿಸಿ… ವೈರಲ್ ಆದ್ಮೇಲೆ ಕೇಸ್! ಟಿ.ನರಸೀಪುರ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ವಿರುದ್ಧ ಯೂಟ್ಯೂಬರ್ ಆರೋಪ

ಟಿ.ನರಸೀಪುರದಲ್ಲಿ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಹೇಳಿಕೆಯ ವಿಡಿಯೋ...

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

Topics

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...
spot_img

Related Articles

Popular Categories

spot_img
error: Content is protected !!