spot_img
Thursday, September 17, 2026
24.1 C
Hubballi

ಕೂಲಿಂಗ್ ಹಾಗೂ ಸರ್ವಿಸ್ ಚಾರ್ಜ್ ಹೆಸರಿನಲ್ಲಿ ಕಲೆಕ್ಷನ್? ಹುಬ್ಬಳ್ಳಿ MRP ಬಾರ್‌ಗಳ ವಿರುದ್ಧ ಗ್ರಾಹಕರ ಆಕ್ರೋಶ

ಹುಬ್ಬಳ್ಳಿ: ಹಬ್ಬದ ಸಂಭ್ರಮದ ನಡುವೆ ಹುಬ್ಬಳ್ಳಿ ನಗರದ MRP ಬಾರ್‌ಗಳಲ್ಲಿ ಗ್ರಾಹಕರಿಂದ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ನಗರದ ಹಲವು MRP ಬಾರ್‌ಗಳಲ್ಲಿ ಬಿಯರ್ ಬಾಟಲಿ ಹಾಗೂ ಟಿನ್‌ಗಳಿಗೆ ನಿಗದಿತ MRPಗಿಂತ ₹5 ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ. ಇದರ ಜೊತೆಗೆ, ಬಿಯರ್‌ನ್ನು ಕೂಲಿಂಗ್ ಮಾಡಿ ನೀಡುವ ಹೆಸರಿನಲ್ಲಿ ಮತ್ತೊಂದು ₹5 ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಇನ್ನು ಈ ಆರೋಪಗಳಿಗೆ ಕಡಿವಾಣ ಹಾಕಬೇಕಾದ ಅಬಕಾರಿ ಇಲಾಖೆ ವಿರುದ್ಧವೂ ಸಾರ್ವಜನಿಕರಿಂದ ಪ್ರಶ್ನೆಗಳು ಕೇಳಿಬರುತ್ತಿವೆ. MRPಗಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟವಾಗುತ್ತಿದ್ದರೆ, ಅದನ್ನು ತಡೆಯುವ ಜವಾಬ್ದಾರಿ ಯಾರದ್ದು? ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ.

ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ಹುಬ್ಬಳ್ಳಿಯ ದೇಶಪಾಂಡೆ ನಗರದ ಬಾಟಲ್ ಬಾಕ್ಸ್ MRP ಬಾರ್ನಲ್ಲಿ ಗ್ರಾಹಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ ಎನ್ನಲಾದ ವಿಡಿಯೋವೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿನ ಹೇಳಿಕೆಯಂತೆ, ₹5 ಹೆಚ್ಚುವರಿ ನೀಡಿದರೆ ಮಾತ್ರ ಬಿಯರ್ ಬಾಟಲಿ ನೀಡಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.

ಹಬ್ಬದ ಸಮಯದಲ್ಲಿ ಗ್ರಾಹಕರಿಂದ ಈ ರೀತಿಯ ಹೆಚ್ಚುವರಿ ಹಣ ವಸೂಲಿ ನಡೆಯುತ್ತಿದೆಯೇ? MRP ನಿಯಮ ಉಲ್ಲಂಘನೆಯಾಗಿದೆಯೇ? ಎಂಬುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸ್ಪಷ್ಟಪಡಿಸಬೇಕಿದೆ.

ಗ್ರಾಹಕರ ಆರೋಪಗಳು ಸತ್ಯವೆಂದು ದೃಢಪಟ್ಟರೆ, ಅಬಕಾರಿ ಇಲಾಖೆ ಬಾರ್ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ? ಅಥವಾ ಹೆಚ್ಚುವರಿ ಹಣ ವಸೂಲಿಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಮುಂದಾಗುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.

Hot this week

₹50 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ: ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್...

ಹುಬ್ಬಳ್ಳಿ ತಾಲೂಕಿನಲ್ಲಿ ಎಟಿಎಂ ಕಳ್ಳರ ಹಾವಳಿ: ಬ್ಯಾಹಟ್ಟಿ, ಸುಳ್ಳ ಗ್ರಾಮಗಳಲ್ಲಿ ದೋಚಾಟ!

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಎಟಿಎಂ ಶೆಟರ್‌ನ...

ಇಂದು ಯಾವ ರಾಶಿಗೆ ಶುಭದಿನ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ನಿಮ್ಮ ರಾಶಿಭವಿಷ್ಯ!

ಇಂದಿನ ದಿನ ಯಾವ ರಾಶಿಯವರಿಗೆ ಹೊಸ ಅವಕಾಶಗಳನ್ನು ತರಲಿದೆ? ಉದ್ಯೋಗ, ವ್ಯಾಪಾರ,...

ಅನಂತ್ ನಾಗ್​​ ಮೇಲೆ ನಡೆದಿತ್ತು ಕೊಲೆ ಯತ್ನ: ನಟ ಪಾರಾಗಿದ್ದು ಹೇಗೆ?

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ...

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ...

Topics

ಪಡಿತರ ಚೀಟಿ ತಿದ್ದುಪಡಿ, ಹಾಗೂ ಹೆಸರು ಸೇರ್ಪಡೆಗೆ 50 ರೂಪಾಯಿ ವಸೂಲಿ, ಇಲ್ಲದಿದ್ದರೆ ಕೆಲಸ ಆಗೋಲ್ಲ!

ಶಿಗ್ಗಾವಿ : ನೀವೇನಾದರೂ ನಿಮ್ಮ ರೇಷನ್ ಕಾರ್ಡ ನಲ್ಲಿ ಹೆಸರು ಬದಲಾವಣೆ,...

200 ವರ್ಷಗಳ ಇತಿಹಾಸವಿರುವ ಬೇಡಿದ್ದೆಲ್ಲ ಕೊಡುವ ಸಿಂಧೂರ ಗಣಪ..

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚಬ್ಬಿ ಗ್ರಾಮದಲ್ಲಿರುವ ಚಬ್ಬಿ ಕಣಪ್ಪ ಅಥವಾ ಸಿಂಧೂರ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮ*ರ್ಡರ್: ಮಾಜಿ ಯೋಧ, ಪುತ್ರಿ ಬರ್ಬರ ಹ*ತ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗ್ರಾಮ ಪಂಚಾಯಿತಿ ಆವರಣದಲ್ಲೇ ಮಾಜಿ...
spot_img

Related Articles

Popular Categories

spot_img
error: Content is protected !!